Friday 28 December 2012

ನಾ ಕಂಡ ಇಬ್ಬನಿಯ, ಕಾಣದ ಕಥೆ





















ಹೂಗಳ ಕಣ್ಗಳ ದಳಗಳ ತುದಿಗೆ
ಏಕೆ ಜಾರದೆ ಉಳಿದೆಯೇ ಇಬ್ಬನಿ!!?
ನವಿರು ಒಡಲ ಜರಿದೆ ನೀರಾಗುತ
ಹೊಸ್ತಿಲಲುಳಿದೆಯಾ ಚಿಂತಿಸಿ ನೀ!!?

ತಡೆಯಿತು ಪಾಪ ಹಿಡಿಯುತ ದಳವು
ಬಿಟ್ಟ ಗುರುತುಗಳ ಅಳಿಸುತಲಿ
ಜಾಡಿಸಿ ಒದ್ದೆ ಕೋಮಲ ಮಡಿಲ,
ಅಳಿಸದ ಗುರುತನ್ನಿಡಿಯುತಲಿ

ಹುಟ್ಟಿಸಿ ತಪ್ಪಿಗೆ, ಬಿಕ್ಕಲು ಕೊಡದೆ
ಹಿಡಿದಿಟ್ಟಿತು ದುಃಖದ ಹೊರೆಯ
ಒರಟಿಗೆ ನೀನು ಸಿಕ್ಕಿದರೆ
ಶಪಿಸುತಲಿ ತಡೆಗಟ್ಟಿದ ಪೊರೆಯ

ವಾಲಾಡುವೆ ತುಸು ಮೆಲ್ಲನೆ ಗಾಳಿಗೆ
ಹಿಂಗುವ ಅವಸರವೇ ನಿನಗೆ?
ಮಿಟುಕಿಸದೆ ಕಣ್ತೆರೆದು ನೋಡಿವೆ
ದಳಗಳು ನಿನ್ನನು ಕೊನೆಗಳಿಗೆ

ಜಾರಿದವೆಷ್ಟೋ ಮಣ್ಣಿನ ಒಡಲಿಗೆ
ಹಾರಿದವೆಷ್ಟೋ ಪಕ್ಕದ ಮಡಿಲಿಗೆ
ನೀನಾದರು ಮಿನುಗಿ, ಸಿಂಚನವಾಗುವೆಯಾ,
ಅಂಜನವಾಗುತ ಹೊತ್ತವುಗಳಿಗೆ?

ಮತ್ತೇ ಹೊಸದಾಯಿತು ಮುಂಜಾನೆ
ಮತ್ತೇ ಬಸಿರಾದವು ತರು ಲತೆಗಳು
ಮತ್ತೆ ಸಂದಿಸುವ "ಋಣವಿದ್ದರೆ"
ಮಂಜಿನ ಮುಸುಕಿನ ಬೆಳಕಿನೊಳು........

                                  --ರತ್ನಸುತ

3 comments:

  1. ಚೆಂದದ ಪದಗಳನ್ನು ಜೋಡಿಸಿ ಸುಂದರ ಕಾವ್ಯ ರಚಿಸಿದ್ದೀರಿ.. ಸಾಮಾನ್ಯವಾಗಿ ನಮ್ಮ ಸ್ಮೃತಿಗೆ ಬಹಳಷ್ಟು ಬಾರಿ ನಿಲುಕದ ಭಾವನೆಗಳು ಈ ಕವನದಲ್ಲಿ ಗೋಚರಿಸಿದವು. ಹೀಗೆಯೇ ಬರೆಯುತ್ತಿರಿ.. :o)

    ReplyDelete
    Replies
    1. Thanks Prashanth.... Nimma bembala heege irali :-)

      Delete
    2. This comment has been removed by the author.

      Delete

ದಣಿವಾರಿ ಕೊಳದಲಿ

ದಣಿವಾರಿ ಕೊಳದಲಿ  ಕೆಂದಾವರೆ ಅರಳಿದೆ  ಮುಗಿಲೇರಿ ಬರದಲಿ  ಹನಿಗೂಡಲು ಇಳಿದಿದೆ  ರವಿಕಾಂತಿ ಸವಿಯುತ  ಹರಳಂತೆ ಮಿನುಗುತಾ  ಬೆರಗಲ್ಲೇ ತಯಾರಿಯಾಗುತಿದೆ  ಮನದಂಗಳ ಮುಂಜಾನೆಯ...